Saturday, April 27, 2024
spot_imgspot_img
spot_imgspot_img

ಮಾಣಿ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ

- Advertisement -G L Acharya panikkar
- Advertisement -

ಮಾಣಿ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ , “ಈ ಸ್ವತಂತ್ರ ಭಾರತದಲ್ಲಿ ಆಡಳಿತ ವ್ಯವಸ್ಥೆ ಹೇಗಿರಬೇಕು, ಈ ಭವ್ಯ ಭಾರತದ ಜವಾಬ್ದಾರಿಯುತ ನಾಗರಿಕರಾಗಿ ನಾವು ಹೇಗೆ ಬಾಳಬೇಕು ಎಂಬ ಅರಿವನ್ನು ನಾವು ಹೊಂದಬೇಕಾದರೆ ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳ ಆಚರಣೆ ಅತೀ ಮುಖ್ಯ. ಇಂತಹ ಆಚರಣೆಗಳು ವಿದ್ಯಾರ್ಥಿಗಳಲ್ಲಿ ನಮ್ಮ ದೇಶಕ್ಕಾಗಿ ತ್ಯಾಗವನ್ನು ಮಾಡಿದ ಮಹಾನ್ ವ್ಯಕ್ತಿಗಳ ಬಗ್ಗೆ, ಸಂವಿಧಾನವನ್ನು ರಚಿಸಲು ಶ್ರಮಿಸಿದವರ ಬಗ್ಗೆ ಅರಿವನ್ನು ಮೂಡಿಸುತ್ತದೆ. ಆ ಮೂಲಕ ನಮ್ಮನ್ನು ಸದಾ ಸಮಾಜ ಸೇವೆಗೆ ಸನ್ನದ್ಧಗೊಳಿಸಿ, ಈ ಭವ್ಯ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಏರಿಸುವಲ್ಲಿ ಸಹಕಾರಿಯಾಗುತ್ತದೆ ” ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತಧಿಕಾರಿ ರವೀಂದ್ರ ದರ್ಬೆ ಹಾಗೂ ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ವಿ ಶೆಟ್ಟಿ ಮಕ್ಕಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲಾ ಮ್ಯಾಗಝಿನ್ ‘ ವಿಕಾಸ ಪಥ ‘ದ ಎರಡನೇ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳಾದ ಪ್ರಗತಿ ಸ್ವಾಗತಿಸಿ, ಸಿಂಚನಶ್ರೀ ವಂದಿಸಿ, ಸ್ವಸ್ತಿ ಕಾರ್ಯಕ್ರಮವನ್ನು ನಿರೂಪಿಸಿದರು.

- Advertisement -

Related news

error: Content is protected !!