- Advertisement -
- Advertisement -






ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.
ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ ಇವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕಬ್ಸ್ ಮತ್ತು ಬುಲ್ ಬುಲ್ಸ್ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನೆರವೇರಿತು. ದಿನದ ಮಹತ್ವದ ಪ್ರತೀಕವಾಗಿ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.
- Advertisement -