Monday, May 6, 2024
spot_imgspot_img
spot_imgspot_img

ಮಾಣಿ: ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ಯಾಂಪಸ್‌ನ ಉದ್ಘಾಟನಾ ಸಮಾರಂಭ ಮತ್ತು ವಾರ್ಷಿಕೋತ್ಸವ

- Advertisement -G L Acharya panikkar
- Advertisement -

ಮಾಣಿ: ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ಯಾಂಪಸ್‌ನ ಉದ್ಘಾಟನಾ ಸಮಾರಂಭ ಮತ್ತು ವಾರ್ಷಿಕ ದಿನ ಕಾರ್ಯಕ್ರಮವು ಡಿ.22 ಮತ್ತು 23 ರಂದು ಬಾಲವಿಕಾಸ ಸಭಾಂಗಣದಲ್ಲಿ ನಡೆಯಲಿದೆ.

ಡಿ.22 ರಂದು ನಡೆಯುವ ಸಮಾರಂಭ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಉದ್ಘಾಟನೆ ಮಾಡಲಿದ್ದಾರೆ. ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರು ಪ್ರಹ್ಲಾದ ಶೆಟ್ಟಿ ಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸತ್ತಿನ ಸದಸ್ಯ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ , ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕರ್ನಾಟಕ ಮಾಜಿ ಮಂತ್ರಿ, ಸಚಿವ ರಮಾನಾಥ ರೈ, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಎಂ. ಪೆರಾಜೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ ಮಾಣಿ, ಮಂಗಳೂರಿನ ಶಕ್ತಿ ಶಿಕ್ಷಣ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ.ಕೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಯಮುನಾ ಹೋಮ್ಸ್ ಡಿಸೆನ್ಸ್ ವ್ಯವಸ್ಥಾಪಕ ಮತ್ತು ನಿರ್ದೇಶಕ ಪುರುಶೋತ್ತಮ ಆರ್ ಶೆಟ್ಟಿ, ಬೆಂಗಳೂರಿನ ವಾಸ್ತುಶಿಲ್ಪಿ ನಿರ್ದೇಶಕ ಸೂರಾಜ್ ಅಂಚನ್, ಎಸ್ಎಸ್ ಇಂಜಿನಿಯರಿಂಗ್ ಮತ್ತು ಸಲಹೆಗಾರ ಸಂತೋಷ್ ಶೆಟ್ಟಿ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಬಿಗ್ ಬಾಸ್ ಖ್ಯಾತಿಯ ಧ್ವನಿ ಕಲಾವಿದ, ನಟ, ನಿರೂಪಕ ಬಡಕ್ಕಿಲ ಪ್ರದೀಪ್ ಅವರಿಗೆ ‘ಬಾಲವಿಕಾಸ ರತ್ನ ಅವಾರ್ಡ್ 2023 ‘ ನೀಡಿ ಗೌರವಿಸಲಿದ್ದಾರೆ.

ಡಿ.23ರಂದು ನಡೆಯುವ ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರು ಪ್ರಹ್ಲಾದ ಶೆಟ್ಟಿ ಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಖಾಸಗಿ ಮಾಧ್ಯಮದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ರೋಹನ್ ಕಾರ್ಪೋರೇಷನ್ ಸಂಸ್ಥಾಪಕ, ಅಧ್ಯಕ್ಷ ರೋಹನ್ ಮೊಂತೇರೊ, ಸೂರಜ್ ಶಿಕ್ಷಣ ಸಂಸ್ಥೆಯ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಮಂಜುನಾಥ ರೇವಣಕರ್, ದೇರಳಕಟ್ಟೆಯ ರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು, ಜನಪ್ರಿಯ ಫೌಂಡೇಷನ್ ಅಧ್ಯಕ್ಷ ಡಾ.ವಿ.ಕೆ. ಅಬ್ದುಲ್ ಬಶೀರ್, ಕಾಂಚೂರು ಇಸ್ಲಾಮಿಕ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಹಜಿ ಯು.ಕೆ ಮೋನು, ಮೈಸೂರು ಮಲಯದ ಕಾಲೇಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಪಾಂಡುರಂಗ ಕೆಎಎಸ್, ದಕ್ಷಿಣ ಕನ್ನಡ ಜಿಲ್ಲೆಯ ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ್ , ಬಂಟ್ವಾಳ ವಲಯ ಶಿಕ್ಷಣಾಧಿಕಾರಿ ಮಂಜುನಾಥ ಎಂ.ಜಿ ಉಪಸ್ಥಿತರಿರುವರು. ಬಾಲವಿಕಾಸ ಟ್ರಸ್ಟ್ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ, ಆಡಳಿತ ಅಧಿಕಾರಿ ರವೀಂದ್ರ ದರ್ಬೆ, ಮುಖ್ಯೋಪಾಧ್ಯಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ, ಪಿಟಿಎ ಅಧ್ಯಕ್ಷರು ಮತ್ತು ಸದಸ್ಯ ಕಸ್ತೂರಿ ಶೆಟ್ಟಿ, ಹಳೆಯ ವಿದ್ಯಾರ್ಥಿ ಸಂಘ, ಶಾಲಾ ವ್ಯವಸ್ಥಾಪಕರು, ಮಾಣಿ ವಿದ್ಯಾನಗರ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಎರಡು ದಿನದ ಕಾರ್ಯಕ್ರಮದಲ್ಲಿ ಶಾಲೆಯ ಆವರಣದಲ್ಲಿ ಫುಡ್ ಪೆಸ್ಟಿವಲ್ ನಡೆಯಲಿದೆ.

- Advertisement -

Related news

error: Content is protected !!