Monday, May 20, 2024
spot_imgspot_img
spot_imgspot_img

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಧ್ಯಯನ ಕೌಶಲ್ಯಗಳ ಬಗ್ಗೆ ಮಾಹಿತಿ ಕಾರ್ಯಾಗಾರ

- Advertisement -G L Acharya panikkar
- Advertisement -

ಮಾಣಿ – ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಹತ್ತನೇ ತರಗತಿಯ ಪ್ರಾರಂಭಿಕ ಹಂತದಲ್ಲಿಯೇ ಪಠ್ಯ ವಿಷಯಗಳಿಗೆ ಪೂರಕವಾಗಿ ಮಾನಸಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಮೇ 07 ರಂದು ಅಧ್ಯಯನ ಕೌಶಲ್ಯಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ನಡೆಯಿತು.

ವ್ಯಕ್ತಿತ್ವ ವಿಕಸನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಷ್ಟ್ರಮಟ್ಟದ ತರಬೇತುದಾರರಾಗಿ ಹೆಸರುವಾಸಿಯಾದ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆ ರಾಮಕುಂಜದ ಮುಖ್ಯೋಪಾಧ್ಯಾಯ ಸತೀಶ್ ಭಟ್ ಬಿಳಿನೆಲೆಯವರು ಹಲವಾರು ಕಲಿಕಾ ಚಟುವಟಿಕೆಗಳ ಮೂಲಕ ಬಹಳ ಪರಿಣಾಮಕಾರಿಯಾಗಿ ಈ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳು ಗಣಿತದ ಸೂತ್ರಗಳು, ವಿಜ್ಞಾನದ ಸಮೀಕರಣಗಳು, ಸಮಾಜ ವಿಜ್ಞಾನದಲ್ಲಿ ಬರುವ ಪ್ರಮುಖ ಘಟನೆಗಳು ಮತ್ತು ಇಸವಿಗಳು ಹಾಗೂ ಇನ್ನಿತರ ಸಾಮಾನ್ಯ ವಿಷಯಗಳನ್ನು ಸುಲಭವಾಗಿ ನೆನಪಿಟ್ಟುಕೊಳ್ಳುವಂತಹ ಕೌಶಲ್ಯಗಳನ್ನು ಸರಳ ರೀತಿಯಲ್ಲಿ ಪ್ರಾಯೋಗಿಕವಾಗಿ ನಡೆಸಿಕೊಟ್ಟರು.

ಈ ಕಾರ್ಯಾಗಾರದಲ್ಲಿ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಸಂಸ್ಥೆಯ ಸಿಬ್ಬಂದಿಗಳು ಹಾಗೂ ಎಸ್ಎಸ್‌ಎಲ್‌ಸಿಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳ ಪರವಾಗಿ ನಿವ್ಯಾ ಮತ್ತು ಮಹಮ್ಮದ್ ತಝೀಮ್ ಇಕ್ಬಾಲ್ ಅನಿಸಿಕೆಯನ್ನು ಹಂಚಿಕೊಂಡರು. ಶಾಲೆಯ ಆಡಳಿತಾಧಿಕಾರಿ ರವೀಂದ್ರ ದರ್ಬೆ ಸ್ವಾಗತಿಸಿ, ವಂದಿಸಿದರು. ಸಹಶಿಕ್ಷಕಿ ಸುಧಾ ಎನ್ ರಾವ್ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!