Wednesday, June 17, 2026
spot_imgspot_img
spot_imgspot_img

ಮಾಣಿ: ಗ್ರಾಮ ಪಂಚಾಯತ್ ಮುಂಭಾಗ ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಮಾಣಿ: ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಮಾಣಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಮಗಳ ಗ್ರಾಮ ಪಂಚಾಯತ್ ವತಿಯಿಂದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಆ ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮುಖಾಂತರ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.. ಮಾಣಿಯಲ್ಲಿ ಸಮಾರೋಪ ಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಾಣಿ ಶಕ್ತಿ ಕೇಂದ್ರ ಪ್ರಮುಖ್ ಹರೀಶ್ ಕುಲಾಲ್ ವಹಿಸಿದ್ದರು.ಜಿಲ್ಲಾ ಪ್ರಮುಖ ನಾಯಕ ಮಾಧವ ಮಾವೆ ಪ್ರಧಾನ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶಿವ ಪ್ರಸಾದ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಅರವಿಂದ್ ರೈ, ನೇರಳಕಟ್ಟೆ ಸೊಸೈಟಿ ಅಧ್ಯಕ್ಷ ಪುಷ್ಪರಾಜ್ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಹಿಳಾ ಮೋರ್ಚಾ ಉಪಾಧ್ಯಕ್ಷರೂ, ಸೊಸೈಟಿ ನಿರ್ದೇಶಕರೂ ಆಗಿರುವ ಶ್ರೀಮತಿ ಶಕೀಲಾ ಕೃಷ್ಣ, ಯುವಮೋರ್ಚಾ ಉಪಾಧ್ಯಕ್ಷ ಹರೀಶ್ ಶೆಟ್ಟಿ ಎಸ್ ಸಿ, ಮೋರ್ಚಾ ಕಾರ್ಯದರ್ಶಿ ಶ್ರೀ ಗೋಪಾಲ್, ಸಹಕಾರ ಪ್ರಕೊಷ್ಠ ಸಂಚಾಲಕ ಜಯರಾಮ್ ರೈ, ಮಂಡಲ ಮೋರ್ಚಾ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಯವರು, ಪಂಚಾಯತ್ ಸದಸ್ಯರು, ಮಾಣಿ ಗ್ರಾಮದ ಪಕ್ಷ ಪ್ರಮುಖರು, ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜನಸಂಘ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಆಚರಿಸಲಾಯಿತು..

ಮಾಣಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ನಾಗೇಶ್ ಭಂಡಾರಿ ಸ್ವಾಗತಿಸಿ , ಬೂತ್ ಅಧ್ಯಕ್ಷ ಪ್ರಜ್ವಲ್ ವಂದಿಸಿದರು.

- Advertisement -

Related news

error: Content is protected !!