ಮಾಣಿ : ಪೆರಾಜೆ ವಿದ್ಯಾನಗರ ಬಾಲವಿಕಾಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಸ್ವಾಗತ ದಿನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವು ಜೂ.1 ರಂದು ಪೆರಾಜೆ ವಿದ್ಯಾನಗರ ಬಾಲವಿಕಾಸ್ ಅಡಿಟೋರಿಯಂನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾಣಿ ಬಾಲವಿಕಾಸ್ ಟ್ರಸ್ಟ್‌ನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ. ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಶಕ್ತಿ ಎಜುಕೇಶನ್ ಟ್ರಸ್ಟ್‌ನ ಸ್ಥಾಪಕ ಡಾ.ಕೆ.ಸಿ ನಾಯ್ಕ್, ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ರೋಹಿಣಿ, ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ, ಬಂಟ್ವಾಳ ತಾ. ಬಿ.ಇ.ಒ ಜ್ಞಾನೇಶ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪೆರಾಜೆ ಪಿಡಿಒ ಸುನಿಲ್ ಕುಮಾರ್, ಶ್ಯಾಮ್ ಸ್ವರೂಪ್ ಕೆ. ಬ್ರಾಂಚ್ ಮ್ಯಾನೇಜರ್ ಬಿ.ಒ.ಬಿ ಮಾಣಿ, ಟಿ.ಎಸ್ ಸಚ್ಚಿದಾನಂದ ರೈ,ಪಲ್ಯ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.