Sunday, June 29, 2025
spot_imgspot_img
spot_imgspot_img

ಮಣಿಪಾಲ: ರಸ್ತೆ ಬದಿ ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ; ಸವಾರ ಸಾವು..!

- Advertisement -
- Advertisement -

ಮಣಿಪಾಲ: ರಸ್ತೆ ಬದಿ ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ನಡೆದಿದೆ.

ಮೃತಪಟ್ಟ ಬೈಕ್‌ ಸವಾರ ಪರ್ಕಳದ ಶೆಟ್ಟಿಬೆಟ್ಟುವಿನ ದೇವು ಪೂಜಾರಿ ಎಂಬವರ ಮಗ ಸೃಜನ್ ಸಾಗರ್(22) ಎಂದು ಗುರುತಿಸಲಾಗಿದೆ.

ಟೈಯರ್ ಸಿಡಿದ ಟ್ಯಾಂಕರ್ ಲಾರಿಯನ್ನು ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಸೃಜನ್, ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದರೆನ್ನಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ. ಇವರು ಮಣಿಪಾಲದ ಕೆಎಂಸಿಯಲ್ಲಿ ಇತ್ತೀಚೆಗೆ ಉದ್ಯೋಗಕ್ಕೆ ಸೇರಿಕೊಂಡಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!