- Advertisement -
- Advertisement -


ಮಣಿಪಾಲ: ವ್ಯಕ್ತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಾಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾ.27 ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ಎನ್ನುವವರು ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಸುಮಂತ್ ರವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಯಾವುದೇ ದೂರು ಬೇಡ ಎಂದು ತಿಳಿಸಿದ್ದು, ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ. 92(o)ಮತ್ತು(r) ರಂತೆ ಪ್ರಕರಣ ದಾಖಲಿಸಿಕೊಂಡಿರುತ್ತದೆ. ಹಾಗೂ ಈ ಬಗ್ಗೆ ಸೂಕ್ತ ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
- Advertisement -