- Advertisement -
- Advertisement -


ಮಣಿಪಾಲ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಪ್ರವೀಣ್ ಎಂಬವರ ಮನೆಯ ಹಿಂದಿನ ಬಾಗಿಲಿನಿಂದ ಒಳ ಪ್ರವೇಶಿಸಿದ ಕಳ್ಳರು, ಸುಮಾರು 40,000ರೂ. ಹಣ ಮತ್ತು 95000ರೂ. ಮೌಲ್ಯದ 19 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








