- Advertisement -
- Advertisement -


ಮಣಿಪಾಲ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ 80 ಬಡಗಬೆಟ್ಟು ಗ್ರಾಮದ ದಶರಥ ನಗರ ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಅಬ್ದುಲ್ ರಜಾಕ್ (26) ಹಾಗೂ ಮುದುಕಪ್ಪ(39) ಎಂದು ಗುರುತಿಸಲಾಗಿದೆ.
ಇವರಿಂದ ಒಟ್ಟು 75 ಮದ್ಯದ ಪ್ಯಾಕೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅರೋಪಿಗಳು ಲೋಕಸಭಾ ಚುನಾವಣಾ ಮತ ಎಣಿಕೆ ಪ್ರಯುಕ್ತ ಮದ್ಯ ಮಾರಾಟ ನಿಷೇದ ಇದ್ದರೂ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -