Wednesday, April 23, 2025
spot_imgspot_img
spot_imgspot_img

ಮಣಿಪಾಲ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಸ್ಕೂಟರ್; ಸವಾರ ಸ್ಥಳದಲ್ಲೇ ಸಾವು..!

- Advertisement -
- Advertisement -

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದಿದ್ದು, ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಣಿಪಾಲದ ದಶರಥ ನಗರ ಬಾಲಿಗಬೆಟ್ಟು ಪಂಚಾಯತ್ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪರ್ಕಳದ ದೇವಿ ನಗರ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ.

ಕೆಲಸದ ನಿಮಿತ್ತ ಅಬೂಬಕರ್ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಪಕ್ಕದ ಕಂದಕಕ್ಕೆ ಉರುಳಿ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಅಬೂಬಕ್ಕರ್ ಅವರು ಹಲವು ಸಂಘ ಸಂಸ್ಥೆಗಳಲ್ಲಿ ದುಡಿದು ಸಮಾಜ ಸೇವೆ ಕಾರ್ಯನಿರತದಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!