- Advertisement -
- Advertisement -



ಮಣಿಪಾಲ: ಹೊಟೇಲ್ ನೌಕರರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಉಳ್ತೂರು ಗ್ರಾಮದ ಉದಯ (43) ಎಂದು ಗುರುತತಿಸಲಾಗಿದೆ.
ಇವರು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿ ಅಸೌಖ್ಯದಿಂದ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ ಇವರ ಮರಣದಲ್ಲಿ ಸಂಶಯ ಇದೆ ಎಂದು ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -