- Advertisement -
- Advertisement -


ಮಣಿಪಾಲ: ಮಣಿಪಾಲದಿಂದ ಉಡುಪಿ ಕಡಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.
ಫೋರ್ಡ್ ಫಿಗೋ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದ್ದು ನಾಲ್ವರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ಈ ಪೈಕಿ ಓರ್ವ ಪ್ರಯಾಣಿಕನ ಸ್ಥಿತಿ ಚಿಂತಾಜನಕವಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಸ್ಟೋನ್ ಹಾರಿ ಪಕ್ಕದಲ್ಲಿದ್ದ ಬೈಕ್‌ಗೆ ಸಾಕಷ್ಟು ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -