Tuesday, October 20, 2026
spot_imgspot_img
spot_imgspot_img

ಮಂಜೇಶ್ವರ: ಕಾರು-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

- Advertisement -
- Advertisement -

ಮಂಜೇಶ್ವರ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಮಂಜೇಶ್ವರದ ವರ್ಕಾಡಿ ಬಳಿ ಸೋಮವಾರ(ಅ.19) ಸಂಜೆ ನಡೆದಿದೆ.

ಮೃತರು ಕೊಡ್ಲಮೊಗರು ನಿವಾಸಿ ಮುಹಮ್ಮದ್ ಟಿ. ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮುಹಮ್ಮದ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಕುರಿತು ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ಕಾರಣವಾದ ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!