- Advertisement -
- Advertisement -





ತಿರುವನಂತಪುರ: ಕಾಸರಗೋಡಿನ ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರು ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸಭೆಯಲ್ಲಿ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದ ವೇಳೆ, ತಮ್ಮ ಸರತಿ ಬಂದಾಗ ಎ.ಕೆ. ಎಂ ಅಶ್ರಫ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದರು
ಕೇರಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎ.ಕೆ.ಎಂ.ಅಶ್ರಫ್ ಭರ್ಜರಿ ಗೆಲುವು ಸಾಧಿಸಿದ್ದಾರೆ,ಕೇರಳ ವಿಧಾನಸಭೆಯ ಅಧಿವೇಶನ ಗುರುವಾರ ಆರಂಭಗೊಂಡಿದ್ದು, ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯುತ್ತಿದ್ದ ವೇಳೆ ಮಂಜೇಶ್ವರ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
- Advertisement -








