Monday, February 10, 2025
spot_imgspot_img
spot_imgspot_img

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ| ಇಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

- Advertisement -
- Advertisement -

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಡಿ.27ರಂದು ಸರಕಾರಿ ರಜೆ ಘೋಷಣೆ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಏಳು ದಿನಗಳವರೆಗೆ ಶೋಕಾಚರಣೆಯ ಜೊತೆಗೆ ನಾಳೆ ಸರಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಸಮಾವೇಶ ಕೂಡಾ ರದ್ದಾಗಿದ್ದು, ಸರಕಾರಿ ರಜೆ ಘೋಷಣೆ ಮಾಡಲಾಗಿದೆ.ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 2004 ರಿಂದ 2014 ರವರೆಗೆ ಅವರು ದೇಶದ ಪ್ರಧಾನಿಯಾಗಿದ್ದರು.

- Advertisement -

Related news

error: Content is protected !!