Sunday, January 26, 2025
spot_imgspot_img
spot_imgspot_img

ಸಿಖ್‌ ಸಂಪ್ರದಾಯದಂತೆ ನೆರವೇರಿದ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

- Advertisement -
- Advertisement -

ನವದೆಹಲಿ: ಸಕಲ ಸರ್ಕಾರಿ ಗೌರವಗಳೊಂದಿಗೆ ನಿಗಮ್ ಬೋಧ ಘಾಟ್‌ನಲ್ಲಿ ಶನಿವಾರ ಸಿಖ್‌ ಸಂಪ್ರದಾಯದಂತೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನೆರವೇರಿತು.

ಅಂತ್ಯಸಂಸ್ಕಾರದ ವೇಳೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು. ಅಂತ್ಯಕ್ರಿಯೆಗೂ ಮುನ್ನ ಡಾ. ಸಿಂಗ್‌ ಅವರಿಗೆ ಮೂರು ಸೇನಾ ಪಡೆಗಳು ಗೌರವ ಸಮರ್ಪಣೆ ಮಾಡಿದರು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮನಮೋಹನ್‌ ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವನ್ನಿರಿಸಿ ಗೌರವ ನಮನ ಸಲ್ಲಿಸಿದರು.

ಬಳಿಕ ಸಿಂಗ್‌ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಈ ನಡುವೆ ‘ಮನಮೋಹನ್‌ ಸಿಂಗ್‌ ಅಮರ್‌ ರಹೇ.. ಅಮರ್‌ ರಹೇ’ ಎಂದು ಘೋಷಣೆ ಕೂಗಲಾಯಿತು. ನಂತರ ಸಿಖ್‌ ಸಂಪ್ರದಾಯದ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನಡೆಯಿತು.

ಉಪರಾಷ್ಟ್ರಪತಿ ಜಗದೀಪ್‌ ಧನಕರ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌,‌ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

- Advertisement -

Related news

error: Content is protected !!