Sunday, November 3, 2024
spot_imgspot_img
spot_imgspot_img

2040ಕ್ಕೆ ಮಾನವ ಸಹಿತ ಚಂದ್ರಯಾನ; ಅನುದಾನಕ್ಕೆ ಕೇಂದ್ರ ಅನುಮೋದನೆ

- Advertisement -
- Advertisement -

ನವದೆಹಲಿ: ಚಂದ್ರನ ಮೇಲೆ ಲ್ಯಾಂಡರ್‌ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದ ಭಾರತ ಇದೀಗ ಚಂದ್ರನ ಮೇಲೆ ಮಾನವರನ್ನು ಕಳಿಸುವ ಸಾಹಸಕ್ಕೆ ಹೊರಡಿದೆ.’

ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

2040ರಲ್ಲಿ ಈ ಸಾಹಸ ನಡೆಸಲು, 2104 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ತಂತ್ರಜ್ಞಾನ ಇನ್ನಷ್ಟೇ ಸಿದ್ದಗೊಳ್ಳಬೇಕಿದೆ.ಎಲ್ಲವೂ ಅಂದುಕೊಂಡಂತೆ ನಡೆದರೆ 2040ಕ್ಕೆ ಈ ಸಾಹಸ ನಡೆಯಲಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅವರನ್ನು ವಾಪಸ್ ಕರೆತರುವ ತಂತ್ರಜ್ಞಾನವನ್ನು ಇಸ್ರೋ ಅನಾವರಣಗೊಳಿಸಬೇಕಿದೆ. ಈ ಯೋಜನೆಗೆ 2,104.06 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!