Wednesday, April 23, 2025
spot_imgspot_img
spot_imgspot_img

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಅನೇಕ ಕಾರ್ಯಕರ್ತರು ಪೊಲೀಸ್ ವಶಕ್ಕೆ

- Advertisement -
- Advertisement -

ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ TASMACನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಪಕ್ಷ ಪ್ರತಿಭಟನೆ ಆಯೋಜಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸೇರಿದಂತೆ ಅನೇಕ ಕಾರ್ಯಕರ್ತರನ್ನು ಪೊಲೀಸರು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ.

TASMACನಲ್ಲಿ 1 ಸಾವಿರ ಕೋಟಿ ರೂಪಾಯಿಯ ಅಕ್ರಮ ನಡೆದಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಆರೋಪಿಸಿತ್ತು. ಹೀಗಾಗಿ TASMACನ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ತಿಳಿಸಿತ್ತು.

ಇದೀಗ ಅಣ್ಣಾಮಲೈ ಅವರನ್ನು ಅವರ ಮನೆಯ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಮಹಿಳಾ ಮೋರ್ಚಾದ ಅಧ್ಯಕ್ಷೆ ಹಾಗೂ ಕೊಯಮತ್ತೂರು ದಕ್ಷಿಣ ಶಾಸಕಿ ವನತಿ ಶ್ರೀನಿವಾಸನ್, ವಿನೋಜ್ ಪಿ ಸೆಲ್ವಂ ಮತ್ತು ಅಮರ್ ಪ್ರಸಾದ್ ರೆಡ್ಡಿಯವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ತಮಿಳಿಸೈ ಸೌಂದರರಾಜನ್ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್‌ನಲ್ಲಿ ಅಣ್ಣಾಮಲೈ ಆರೋಪಿಸಿದ್ದಾರೆ.

- Advertisement -

Related news

error: Content is protected !!