Friday, May 17, 2024
spot_imgspot_img
spot_imgspot_img

ಮಂಗಳೂರು : ಎಳನೀರು ಸೇವಿಸಿ ಹಲವರು ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್​ಗೆ ಆದೇಶ

- Advertisement -G L Acharya panikkar
- Advertisement -

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.

ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಅವರನ್ನು ಒಳಗೊಂಡ ತಂಡ ಗುರುವಾರ ಅಡ್ಯಾರ್‌ನ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಾ.ತಿಮ್ಮಯ್ಯ ಅವರು, ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದ್ದು, ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಮಂಗಳೂರು, ಬಂಟ್ವಾಳದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!