- Advertisement -
- Advertisement -
ಬಂಟ್ವಾಳ: ಕೊರೋನ ಸೋಂಕಿನಿಂದ ಮೃತಪಟ್ಟ ಕಲ್ಲಡ್ಕದ ನಿವಾಸಿ ಕಲ್ಲಡ್ಕದ ಅಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದಿದ್ದು ಈ ಆಸ್ಪತ್ರೆಗೆ ಕಲ್ಲಡ್ಕ ಪರಿಸರದ ಹೆಚ್ಚಿನವರು ತೆರಳುತ್ತಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಲ್ಲಡ್ಕ ಜುಮಾ ಮಸೀದಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಹಾಗೆಯೇ ಬಿ.ಸಿ.ರೋಡ್ ತಲಪಾಡಿಯ ಮಹಿಳೆಯೊಬ್ಬರಿಗೆ ಕೊರೋನ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಕೂಡಾ ಮುಂಜಾಗ್ರತಾ ಕ್ರಮವಾಗಿ ತಲಪಾಡಿ ಮಸೀದಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಮಸೀದಿಗಳಲ್ಲಿ ಕೆಲಸ ನಿರ್ವಹಿಸುವ ಗುರುಗಳನ್ನು ಹೊರತು ಪಡಿಸಿ ಉಳಿದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -