Wednesday, September 30, 2026
spot_imgspot_img
spot_imgspot_img

MRPLನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರು,: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ ವೇಳೆ ಸಂಭವಿಸಿದ ಭಾರೀ ಸ್ಫೋಟ – ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮೃತರನ್ನು ಮುಲ್ಕಿ ಮೂಲದ 30 ವರ್ಷದ ಮನೀಶ್ ಕರ್ಕೇರ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಅವಘಡ ನಡೆದ ಪ್ರದೇಶದಲ್ಲಿ ಕಣ್ಮರೆಯಾಗಿದ್ದು, ಮನೀಶ್ ಕರ್ಕೇರ ಅವರು ಅಲ್ಲಿ ಗುತ್ತಿಗೆಯಾಧಾರದಡಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಸುಟ್ಟ ಗಾಯಗಳು ಹಾಗೂ 8 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

- Advertisement -

Related news

error: Content is protected !!