Saturday, June 6, 2026
spot_imgspot_img
spot_imgspot_img

ಉಡುಪಿ: ಬಾ‌ರ್ ಮಾಲೀಕನ ಮನೆಯಲ್ಲಿ ಭಾರೀ ಅಗ್ನಿ ಅವಘಡ : ದಂಪತಿ ಗಂಭೀರ

- Advertisement -
- Advertisement -

ಉಡುಪಿ: ನಗರದ ಬಾರ್‌ವೊಂದರ ಮಾಲೀಕರ ಮನೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಬಾರ್ ಮಾಲೀಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದೆಂದು ಸ್ಥಳೀಯರು ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಕೂಡಲೇ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಿಸಿದ್ದಾರೆಂದು ತಿಳಿದು ಬಂದಿದೆ.

ಇವರಲ್ಲಿ ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದ ದಂಪತಿಯನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ನಂದಿಸುವ ಕಾರ್ಯಚರಣೆ ಮುಂದುವರಿದಿದೆ. ಅಗ್ನಿ ಅವಘಡದಿಂದ ಮನೆಯು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಈ ದುರ್ಘಟನೆಗೆ ಕಾರಣ ಮಾತ್ರ ತಿಳಿದು ಬಂದಿಲ್ಲ, ಪೊಲೀಸರ ಪ್ರಕರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಮನೆಯ ಫಿಡ್ಜ್ ಬ್ಲಾಸ್ಟ್ ಆಗಿರುವ ಸಾಧ್ಯತೆ ಇರಬಹುದು ಎಂದು ಅಂದಾಜಿಸಲಾಗಿದೆ.

- Advertisement -

Related news

error: Content is protected !!