Thursday, August 6, 2026
spot_imgspot_img
spot_imgspot_img

ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ: ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಕರೆ

- Advertisement -
- Advertisement -

ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 7 (ನಾಳೆ) ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ತಿಳಿಸಿದರು.

ಈ ಬಗ್ಗೆ ಮಾತನಾಡಿದ ಅವರು, “ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮಧ್ಯಾಹ್ನ 2.30ಕ್ಕೆ ಪೂಜೆ ನಡೆದು, 3 ಗಂಟೆಗೆ ತಿರಂಗಾ ಯಾತ್ರೆಗೆ ಚಾಲನೆ ನೀಡಲಾಗುವುದು. ಯಾತ್ರೆಯು ಕಿಲ್ಲೆ ಮೈದಾನದಲ್ಲಿ ಮುಕ್ತಾಯವಾಗಲಿದೆ” ಎಂದು ಹೇಳಿದರು.

ಈ ಯಾತ್ರೆಗೆ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದರು. ಈ ಯಾತ್ರೆಯು ರಾಷ್ಟ್ರಪ್ರೇಮ ಮತ್ತು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕರಿಗೆ ಗೌರವ ಸಲ್ಲಿಸುವುದರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತದ ಸಾಧನೆಯನ್ನು ಸ್ಮರಿಸುವ ಉದ್ದೇಶ ಹೊಂದಿದೆ ಎಂದು ಕಿಶೋರ್ ಬೊಟ್ಯಾಡಿ ಹೇಳಿದರು. ಅಲ್ಲದೆ ದೇಶ ವಿರೋಧಿ ಚಟುವಟಿಕೆಗಳನ್ನು ಖಂಡಿಸುವ ಸಂಕೇತವಾಗಿಯೂ ಇದನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

- Advertisement -

Related news

error: Content is protected !!