Tuesday, June 25, 2024
spot_imgspot_img
spot_imgspot_img

ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿ: ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ

- Advertisement -G L Acharya panikkar
- Advertisement -

ನವದೆಹಲಿ: ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿ ಎಂದು ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಆಗ್ರಹಿಸಿದ್ದಾರೆ. ರಾಜಸ್ಥಾನ ಸರ್ಕಾರ ಬಿಕ್ಕಟ್ಟು ಬಗ್ಗೆ ಟ್ವೀಟ್ ಮಾಡಿದ ಅವರು, ರಾಜಸ್ಥಾನ ಸಿಎಂ ಕಾನೂನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಇವರು ತಮ್ಮ ಶಾಸಕರನ್ನು ಕಾಪಾಡಿಕೊಳ್ಳಲು ಬೇರೆ ಪಕ್ಷದ ಶಾಸಕರ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಹೀಗಾಗಿ ರಾಷ್ಟ್ರಪತಿಗಳ ಆಡಳಿತ ಜಾರಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೊಂದು ಟ್ವೀಟ್ ಮಾಡಿರುವು ಅವರು, ರಾಜಸ್ಥಾನ ಸರ್ಕಾರ ಬಿಕ್ಕಟ್ಟಿನ ಬಗ್ಗೆ ರಾಜ್ಯಪಾಲರು ಸಂಪೂರ್ಣ ವಿವರವನ್ನು ರಾಷ್ಟ್ರಪತಿಗಳಿಗೆ ನೀಡಬೇಕು. ಬಳಿಕ ರಾಷ್ಟ್ರಪತಿಗಳ ಆಡಳಿತಕ್ಕೆ ಶಿಫಾರಸು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಹೇಳಿದ್ದಾರೆ.

ಜನರ ಬಗ್ಗೆ ಯೋಚಿಸಿ ಎಂದ ಮಾಜಿ ಸಿಎಂ ವಸುಂಧರಾ ರಾಜೇ
ರಾಜಸ್ಥಾನ ಸರ್ಕಾರದಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದರೂ ಇಷ್ಟುದಿನ ಮೌನವಹಿಸಿದ್ದ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕಿ ಸಿಎಂ ವಸುಂದರಾ ರಾಜೇ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ನೊಳಗಿನ ಬಿಕ್ಕಟ್ಟಿನಿಂದ ರಾಜಸ್ಥಾನ ಸರ್ಕಾರ ಬಳಲುತ್ತಿದೆ. ಆದರೆ ಜನರ ಬಗ್ಗೆ ಯೋಚಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜಸ್ಥಾನದಲ್ಲಿ ಕೊರೊನಾದಿಂದ ಸುಮಾರು 500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮತ್ತೊಂದು ಕಡೆ ಮಿಡತೆಗಳ ಹಾವಳಿ ಜೋರಾಗಿದೆ. ಈ ನಡುವೆ ಜನರ ಬಗ್ಗೆ ಯೋಚಿಸುವುದನ್ನು ಬಿಟ್ಟು ಸರ್ಕಾರ ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ. ಜನರ ಹಿತಾಸಕ್ತಿಯೇ ಅತ್ಯುನ್ನತ ಸ್ಥಾನದಲ್ಲಿರಬೇಕು ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!