Sunday, June 21, 2026
spot_imgspot_img
spot_imgspot_img

ಮಂಗಳೂರು : ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರ ಬಂಧನ; ಸ್ವತ್ತು ಹಾಗೂ ಕಾರು ವಶಕ್ಕೆ

- Advertisement -
- Advertisement -

ಮಂಗಳೂರು: ಮಾದಕ ವಸ್ತು ಮಾರಾಟ ಹಾಗೂ ಸಾಗಾಟದ ವಿರುದ್ಧ ಸಮರ ಸಾರಿರುವ ಮಂಗಳೂರು ಪೋಲೀಸರು ಇಂದು ಮತ್ತೆ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಕೋಣಾಜೆ ಪೋಲಿಸರು ಇಬ್ಬರನ್ನು ಬಂಧಿಸಿದ್ದು, ಬಂಧಿತ ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.ಬಂಧಿತ ಆರೋಪಿಗಳಿಂದ 3.90 ಲಕ್ಷ ರೂ. ಮೌಲ್ಯದ 65 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಳ್ಳಲಾಗಿದೆ.

ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಅಕ್ರಮವಾಗಿ ಮೆಲ್ಕಾರ್, ಮುಡಿಪು, ನಾಟೆಕಲ್ ದಾರಿಯಾಗಿ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ್ ಬಿರಾದರ್ ಹಾಗೂ ತಂಡ ಮಂಜನಾಡಿ ಗ್ರಾಮದ ನಾಟೆಕಲ್, ವಿಜಯನಗರ ಎಂಬಲ್ಲಿ ಆರೋಪಿಗಳ ಮೇಲೆ ದಾಳಿ ನಡೆಸಿದ್ದಾರೆ.

ಆರೋಪಿಗಳನ್ನು ಬಂಧಿಸಿರುವ ಕೋಣಾಜೆ ಪೊಲೀಸರು 5 ಲಕ್ಷ ರೂ. ಮೌಲ್ಯದ ಸ್ವಿಫ್ಟ್ ಕಾರು, 4 ಮೊಬೈಲ್ ಫೋನ್‌ಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೋಲಿಸರು ತಿಳಿಸಿದ್ದಾರೆ.

- Advertisement -

Related news

error: Content is protected !!