Wednesday, July 22, 2026
spot_imgspot_img
spot_imgspot_img

ಮಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ – 50 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ

- Advertisement -
- Advertisement -

ಮಂಗಳೂರು: ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 50 ಲಕ್ಷ ಮೌಲ್ಯದ ಸುಮಾರು 517.76 ಗ್ರಾಂ ಎಂ.ಡಿ.ಎಂ.ಎ. ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ.

ಸಾಂದರ್ಭಿಕ ಚಿತ್ರ

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ ಕನ್ವಿನ್ಷನ್ ಹಾಲ್ ಬಳಿ ಒಂದು ಕಾರಿನಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಮೊಹಮ್ಮದ್ ಶಿಯಾಬ್ @ ಶಿಯಾಬ್, ಮೊಹಮ್ಮದ್ ನೌಷದ್ @ ನೌಷದ್, ಇಮ್ರಾನ್ @ ಇಂಬ, ನಿಸಾರ್ ಅಹಮ್ಮದ್ @ ನಿಸಾರ್ ನಾಲ್ವರು ಆರೋಪಿಗಳನ್ನು ಬಂಧಿಸಿ ಸುಮಾರು 50 ಲಕ್ಷ ಮೌಲ್ಯದ ಸುಮಾರು 517.76 ಗ್ರಾಂ ಎಂ.ಡಿ.ಎಂ.ಎ. ಎಂಬ ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ 10 ಲಕ್ಷ ಮೌಲ್ಯದ ನೀಲಿ ಬಣ್ಣದ ಮಾರುತಿ ಕಂಪನಿಯ FRONX ಮಾದರಿಯ ಕೆಎ-70-ಎಮ್ -7115 ಕಾರು, ಹಾಗೂ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಮಾದಕ ವಸ್ತುವನ್ನು ಒಬ್ಬ ನೈಜೀರಿಯಾ ದೇಶದ ವ್ಯಕ್ತಿ ಬೆಂಗಳೂರಿಗೆ ತಂದು ಅಲ್ಲಿಂದ ಮಂಗಳೂರು ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪೂರೈಕೆಯಾಗುತ್ತಿದೆ ತಿಳಿದು ಬಂದಿದೆ. ಆರೋಪಿಗಳ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:124/2025 ಕಲಂ:22(ಸಿ), 21(C) ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಂಗಳೂರು ನಗರದ ಸಿ.ಸಿ.ಬಿ. ಘಟಕದ ಎ.ಸಿ.ಪಿ. ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಸಿ.ಸಿ.ಬಿ.ಯ ತಂಡವು ಕಾರ್ಯಾಚರಣೆ ನಡೆಸಲಾಯಿತು.

- Advertisement -

Related news

error: Content is protected !!