ಮಂಗಳೂರು, ಮಾ.22: ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದು, ಅವನಿಂದ ಸುಮಾರು ₹1,06,000 ಮೌಲ್ಯದ ನಿಷೇಧಿತ ಮಾದಕ ವಸ್ತು ಎಮ್ಡಿಎಮ್ಎ ಸೇರಿದಂತೆ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಮೊಹಮ್ಮದ್ ಝಾಕೀರ್ (19) ಎಂದು ಗುರುತಿಸಲಾಗಿದೆ. ಈತನು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಗಿರಾಕಿಗಳಿಗೆ ಎಮ್ಡಿಎಮ್ಎ ಮಾದಕ ವಸ್ತುವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಉಳ್ಳಾಲ ತಾಲೂಕಿನ ಬೆಳ್ಳ ಗ್ರಾಮದ ಕೆ.ಎಸ್. ಹೆಗ್ಡೆ ಆಸ್ಪತ್ರೆ ಎದುರಿನ ಫೀಜಾ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಪಂಚರ ಸಮ್ಮುಖದಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಆರೋಪಿಯಿಂದ 10.6 ಗ್ರಾಂ ತೂಕದ ಎಮ್ಡಿಎಮ್ಎ, ಒಂದು ಸ್ಯಾಮ್ಸಂಗ್ ಮೊಬೈಲ್ ಫೋನ್, ತೂಕಮಾಪನ ಯಂತ್ರ, ಸ್ಟೋಕ್ ಟ್ಯೂಬ್, ಸಿರಿಂಜ್, ಸಿಗರ್ ಲೈಟ್ ಹಾಗೂ ನಂಬರ್ ಪ್ಲೇಟ್ ಇಲ್ಲದ ಹೀರೋ ಹೋಂಡಾ ಸ್ಟೆಂಡರ್ ಪ್ಲಸ್ ಬೈಕ್ ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ 1985ರ ಕಲಂ 8(c), 22, 22(a), 22(b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.








