Friday, April 26, 2024
spot_imgspot_img
spot_imgspot_img

ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪರವರಿಂದ ಸಭೆ.

- Advertisement -G L Acharya panikkar
- Advertisement -

ಮಾನ್ಯ ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪರವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಕುರಿತಾದ ಸಭೆ ನಡೆಯಿತು.

ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್, ಮೂಡಬಿದಿರೆ ಶಾಸಕರಾದ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ಭಾಗವಹಿಸಿದ್ದು ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಗಳಾದ ಅಮ್ಮುಂಜೆ ಗ್ರಾಮದ 1215 ಮನೆಗಳಿಗೆ,ಬಡಗಬೆಳ್ಳೂರು ಗ್ರಾಮದ 823 ಮನೆಗಳಿಗೆ,ತೆಂಕಬೆಳ್ಳೂರು ಗ್ರಾಮದ 314 ಮನೆಗಳಿಗೆ,ಕಳ್ಳಿಗೆ ಗ್ರಾಮದ 1273 ಮನೆಗಳಿಗೆ,ಕರಿಯಂಗಳ ಗ್ರಾಮದ 890 ಮನೆಗಳಿಗೆ ಒಟ್ಟು 4 ಗ್ರಾ.ಪಂನ 51 ಜನ ವಸತಿಗಳ 4815 ಮನೆಗಳಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕ ಒದಗಿಸುವ ಬಗ್ಗೆ ಕಾರ್ಯಯೋಜನೆ ರೂಪಿಸಲಾಗಿದ್ದು ಮಾನ್ಯ ಸಚಿವರು ಅನುಮೋದನೆ ನೀಡಿ ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಇದಲ್ಲದೆ ಮಂಗಳೂರು ಹಾಗೂ ಮೂಡಬಿದಿರೆ ತಾಲೂಕಿನ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಚಿವರು ಅನುಮೋದನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಇಲಾಖೆಯ ಸರಕಾರದ ಪ್ರ.ಕಾರ್ಯದರ್ಶಿ ಎಲ್.ಕೆ ಅತಿಕ್,ಗ್ರಾಮೀಣ ಕುಡಿಯುವ ನೀರಿನ ಮತ್ತು ನೈರ್ಮಲ್ಯ ಇಲಾಖೆಯ ಮುಖ್ಯ ಇಂಜಿನೀಯರ್ ಹೊಳೆಯಾಜಿ ಉಪಸ್ಥಿತರಿದ್ದರು.

- Advertisement -

Related news

error: Content is protected !!