Thursday, August 6, 2026
spot_imgspot_img
spot_imgspot_img

ಕೇಂದ್ರ ಸರ್ಕಾರದ ಎಚ್ಚರಿಕೆ ಬೆನ್ನಲ್ಲೇ ಕ್ಷಮೆ ಕೋರಿದ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್

- Advertisement -
- Advertisement -

ನವದೆಹಲಿ: ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರವಾದ ಸಿಎಸ್‌ಎಎಮ್(CSAM – ಮಕ್ಕಳ ಲೈಂಗಿಕ ಶೋಷಣೆ ವಿಷಯ) ವಿಷಯ, ಡಿಪ್‌ಫೇಕ್ ವಿಷಯಗಳು ಹಾಗೂ ಪ್ಲಾಟ್‌ಫಾರ್ಮ್ ನಿರ್ವಹಣೆಯಲ್ಲಿನ ಲೋಪದೋಷಗಳಿಗಾಗಿ ಕ್ಷಮೆಯಾಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೊವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದಕ್ಕಾಗಿ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು 3 ದಿನಗಳ ಒಳಗೆ ಬೇಷರತ್ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಭಾರತದಲ್ಲಿ ಕಂಪನಿಯು ಪಡೆಯುತ್ತಿರುವ ‘ಸೇಫ್ ಹಾರ್ಬರ್’ ರಕ್ಷಣೆಯನ್ನು ಹಿಂಪಡೆಯಲಾಗುವುದು ಎಂದು ಸಂಸದೀಯ ಸಮಿತಿ ಎಚ್ಚರಿಕೆ ನೀಡಿತ್ತು.

ಈ ಎಚ್ಚರಿಕೆಯ ಬೆನ್ನಲ್ಲೇ ನಿರ್ದಿಷ್ಟ ರೀತಿಯ ವಿಷಯಗಳನ್ನು ಬೂಸ್ಟ್ ಮಾಡಲು (ಪ್ರಚಾರ ಮಾಡಲು) ಹೆಚ್ಚಿನ ಹಣ ಪಾವತಿಸಲಾಗಿದೆ ಎಂಬುದನ್ನು ಜುಕರ್‌ಬರ್ಗ್‌ ಒಪ್ಪಿಕೊಂಡಿದ್ದಾರೆ ಹಾಗೂ ಈ ತಪ್ಪಿಗಾಗಿ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೋರಿದ್ದಾರೆ.

ಮಂಗಳವಾರ ಸಂಸದೀಯ ತಂತ್ರಜ್ಞಾನ ಸಮಿತಿಯ ಅಧ್ಯಕ್ಷ ನಿಶಿಕಾಂತ್ ದುಬೆ ಅವರು ಮಾತನಾಡಿ, ಕೇವಲ ಕ್ಷಮೆಯಾಚನೆ ಮಾತ್ರ ಸಾಕಾಗುವುದಿಲ್ಲ, ಈ ಲೋಪಕ್ಕೆ ಕಾರಣರಾದವರ ಮೇಲೆ ಜವಾಬ್ದಾರಿ ನಿಗದಿಪಡಿಸಬೇಕು” ಎಂದು ಸ್ಪಷ್ಟಪಡಿಸಿದ್ದಾರೆ. ಜುಕರ್‌ಬರ್ಗ್ ಅವರು ವೈಯಕ್ತಿಕವಾಗಿ ಕ್ಷಮೆಯಾಚಿಸದಿದ್ದರೆ, ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 79ರ ಅಡಿಯಲ್ಲಿ ಮೆಟಾ ಪಡೆಯುತ್ತಿರುವ ‘ಸೇಫ್ ಹಾರ್ಬರ್’ ರಕ್ಷಣೆಯನ್ನು ಹಿಂಪಡೆಯಲು ಶಿಫಾರಸು ಮಾಡಲಾಗುವುದು ಎಂದು ಹೇಳಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!