

ನವದೆಹಲಿ: ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವಾಗಿ 16 ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದೆ. ಮುಂದಿನ ಆದೇಶದವರೆಗೆ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಮುಚ್ಚಿರಲಾಗುತ್ತದೆ ದೆಹಲಿ ಮೆಟ್ರೋ ರೈಲು ನಿಗಮ ತಿಳಿಸಿದೆ.
ಲೋಕ ಕಲ್ಯಾಣ ಮಾರ್ಗ, ರಾಜೀವ್ ಚೌಕ್, ಪಟೇಲ್ ಚೌಕ್, ರಾಮಕೃಷ್ಣ ಆಶ್ರಮ ಮಾರ್ಗ, ಬಾರಾಖಂಬಾ ರೋಡ್, ಸುಪ್ರೀಂ ಕೋರ್ಟ್, ಸೇವಾ ತೀರ್ಥ, ಜನಪಥ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್, ಐಟಿಒ, ದೆಹಲಿ ಗೇಟ್, ಇಂದ್ರಪ್ರಸ್ಥ, ಖಾನ್ ಮಾರ್ಕೆಟ್, ಜೋರ್ ಬಾಗ್, ಶಿವಾಜಿ ಸ್ಟೇಡಿಯಂ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ರಾಜೀವ್ ಚೌಕ್, ಮಂಡಿ ಹೌಸ್ ಮತ್ತು ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣಗಳಲ್ಲಿ ಬೇರೆ ಲೈನ್ಗಳಿಗೆ ಮಾರ್ಗ ಬದಲಾಯಿಸುವ ಸೌಲಭ್ಯವು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.








