Wednesday, May 15, 2024
spot_imgspot_img
spot_imgspot_img

ವಿಟ್ಲದ ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಎಂ.ಜಿ.ಆ‌ರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನೆ

- Advertisement -G L Acharya panikkar
- Advertisement -

ವಿಟ್ಲ: ಎಂ.ಜಿ.ಆರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ.15 ರಂದು ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶುಭಹಾರೈಸಿದರು. ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಖತೀಬ ಮಹಮ್ಮದ್ ರಫೀಖ್ ಅಹ್ಸನಿ, ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯ ಫಾ|ಸುನೀಲ್ ಪ್ರವೀಣ್ ಪಿಂಟೋ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಬಂಗಾರು ಅರಸರು ವಿಟ್ಲ ಅರಮನೆರವರು ಗೌರವ ಉಪಸ್ಥಿತರಿದ್ದು ಮಾತನಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್, ವಿಟ್ಲ ಮುಡ್ನೂರು ಗ್ರಾಮದ ಕೃಷಿಕ ಚಂದ್ರಶೇಖರರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗಣ್ಯರಾದ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಜ|ಎಂ.ಎಸ್ ಮುಹಮ್ಮದ್, ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಅಧ್ಯಕ್ಷ ಜ|ರಶೀದ್ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಜ|ವಿ.ಕೆ.ಎಂ ಅಶ್ರಫ್, ನಿವೃತ್ತ ಉಪತಹಶೀಲ್ದಾರರಾದ ಜ| ಡಿ.ಬಿ ಅಬೂಬಕ್ಕರ್ ಒಕ್ಕೆತ್ತೂರು, ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಾಬು ಕೊಪ್ಪಳ, ವಿಟ್ಲ ಡಿ’ಗ್ರೂಪ್ ಅಧ್ಯಕ್ಷ ಜ|ಕಲಂದರ್ ಪರ್ತಿಪ್ಪಾಡಿ, ವಿಟ್ಲ ಪ.ಪಂ.ಸದಸ್ಯ ಜ|ಅಶೋಕ್ ಕುಮಾರ್ ಶೆಟ್ಟಿ, ಜ|ಅಬ್ದುಲ್ಲಾ ಹಾಜಿ ಬೈರಿಕಟ್ಟೆ ಉದ್ಯಮಿಗಳು ವಿಟ್ಲ, ವಿಟ್ಲ ಜೆಸಿಐ ಅಧ್ಯಕ್ಷ ಸಂತೋಷ್ ಕುಮಾರ್‍ ಪೆಲ್ತಡ್ಕ ಉಪಸ್ಥಿತರಿದ್ದು ಶುಭಹಾರೈಸಿದರು.

- Advertisement -

Related news

error: Content is protected !!