- Advertisement -
- Advertisement -



ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಸದ್ಯ, ಈ ವಿಚಾರದ ಬಗ್ಗೆ ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.
- Advertisement -