Monday, June 15, 2026
spot_imgspot_img
spot_imgspot_img

ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಓರ್ವ ಯೋಧನಿಗೆ ಗಾಯ..!

- Advertisement -
- Advertisement -

ಶ್ರೀನಗರ: ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧನಿಗೆ ತೀವ್ರ ಗಾಯಗೊಂಡ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಉಗ್ರರು ದಾಳಿ ನಡೆಸಿದ್ದು, ಉಗ್ರರು ದಾಳಿ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿ ಕೂಡ ಪ್ರತಿದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ.

ಘಟನೆಯ ನಂತರ ಭದ್ರತಾ ಸಿಬ್ಬಂದಿ ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!