- Advertisement -
- Advertisement -





ಮಂಡ್ಯ: ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ.
ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತ ದುರ್ದೈವಿಗಳು. ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಬಳಿಕ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಮೂವರು ಗಣೇಶ ಹಬ್ಬ ಮುಗಿಸಿ ಮುಂಜಾನೆ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -








