- Advertisement -
- Advertisement -
ಬೆಳ್ತಂಗಡಿ : ಮನೆಯ ಟಿ ವಿ ಸ್ಟ್ಯಾಂಡ್ ನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಪ್ರಸನ್ನ ಕುಮಾರ್ ಎ (75) ಅವರು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮನೆಯ ಹಾಲ್ ನ ಟಿವಿ ಸ್ಟಾಂಡ್ ನಲ್ಲಿಟ್ಟಿದ್ದ 5.05 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಹಾಗೂ 5 ಲಕ್ಷ ರೂಪಾಯಿ ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 82/2024 ಕಲಂ: 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ.
- Advertisement -