- Advertisement -
- Advertisement -





ಅಳಿಕೆ ಸತ್ಯ ಸಾಯಿ ಲೋಕ ಸೇವಾ ಶಿಕ್ಷಣ ಸಂಸ್ಥೆಗೆ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿದರು.
ಸಚಿವರು ಶಿಕ್ಷಣ ಸಂಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಅಳಿಕೆ ಸತ್ಯಸಾಯಿ ಗೋಶಾಲೆಗೆ ಭೇಟಿ ನೀಡಿ ಅಲ್ಲಿದ್ದ ಗೋವುಗಳಿಗೆ ಮೇವು ನೀಡಿ ನಮಸ್ಕರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಅಳಿಕೆ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೆ ಕೃಷ್ಣ ಭಟ್ ಸಂಸ್ಥೆಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಟ್ರಸ್ಟ್ ನ ಕಾರ್ಯದರ್ಶಿ ಚಂದ್ರಶೇಖರ ಭಟ್ ಸಚಿವರಿಗೆ ಶಾಲು , ಹಾರ ಹಾಕಿ ಫಲ ನೀಡಿ ಸಂಸ್ಥೆಯ ವತಿಯಿಂದ ಗೌರವಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಸಹಿತ ಪ್ರಮುಖರು ಉಪಸ್ಥಿತರಿದ್ದರು.
- Advertisement -








