- Advertisement -
- Advertisement -




ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿದೆ.
ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಸ್ಥಳೀಯರು ಧರ್ಮದೇಟು ಕೊಟ್ಟಿದ್ದಾರೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಯುವಕನನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
- Advertisement -








