Monday, June 15, 2026
spot_imgspot_img
spot_imgspot_img

ಬೆಳ್ತಂಗಡಿ : 10ಕ್ಕೂ ಅಧಿಕ ನಾಯಿಗಳಿಗೆ ವಿಷ ಹಾಕಿ ಹತ್ಯೆಗೈದ ಕಿಡಿಗೇಡಿಗಳು

- Advertisement -
- Advertisement -

ಬೆಳ್ತಂಗಡಿ : 10ಕ್ಕೂ ಅಧಿಕ ನಾಯಿಗಳಿಗೆ ವಿಷ ಹಾಕಿ ಸಾಯಿಸಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ಎಂಬಲ್ಲಿ ನಡೆದಿದೆ.

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಅವುಗಳನ್ನು ತಿಂದಿರುವ ನಾಯಿಗಳು ಅಲ್ಲಲ್ಲಿ ಸತ್ತು ಬಿದ್ದಿವೆ. ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಜನರು ಇದನ್ನು ಗಮನಿಸಿ ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.ಇನ್ನು ಸಾವನ್ನಪ್ಪಿದ ನಾಯಿಗಳನ್ನು ಪಂಚಾಯತ್ ವತಿಯಿಂದ ಹೂಳುವ ವ್ಯವಸ್ಥೆ ಮಾಡಲಾಯಿತು.

- Advertisement -

Related news

error: Content is protected !!