Sunday, June 29, 2025
spot_imgspot_img
spot_imgspot_img

ಕನ್ನಡತಿಗೆ ವಿಶ್ವ ಸುಂದರಿ – 2024 ಕಿರೀಟ!

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮ ರೋಗ ತಜ್ಞೆಯಾಗಿ ಎಂ.ಡಿ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ವೃತ್ತಿಯಲ್ಲಿ ವೈದ್ಯೆಯಾಗಿದ್ದರು ಈಕೆ ಭರತನಾಟ್ಯ ಕಲಾವಿದೆಯಾಗಿ, ದುಬೈ, ಮಾಲ್ಡೀವ್ಸ್, ಭೂತಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಕೆಲವು ಕನ್ನಡ ಧಾರಾವಾಹಿ, ಕನ್ನಡ ಚಲನಚಿತ್ರಗಳು ಸೇರಿದಂತೆ ವೆಬ್ ಸಿರೀಸ್‌ನಲ್ಲಿ ನಟಿಸಿದ್ದಾರೆ.

ಅಮೆರಿಕಾದ ಫ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10ರವರೆಗೆ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು.ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವೈಯಕ್ತಿಕ ಸಂದರ್ಶನ ಮುಂತಾದ ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ನಡೆದಿತ್ತು. ಈ ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿ, ಕೊನೆಗೆ ಡಾ.ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.‌ ಈಕೆ ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ (Miss South India) ವಿಜೇತೆಯಾಗಿದ್ದರು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ, ಈಗ ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

- Advertisement -

Related news

error: Content is protected !!