- Advertisement -
- Advertisement -




ಪುತ್ತೂರು: ಬನ್ನೂರು ಚೆಲುವಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅವರ ಪುತ್ರ ಅಬೂಬಕ್ಕರ್ ಸಿದ್ದೀಕ್ (21) ನಾಪತ್ತೆಯಾಗಿರುವ ಬಗ್ಗೆ ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.ಸಿದ್ದೀಕ್ ನನ್ನೊಂದಿಗೆ ಸಂತೆಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದು, ಫೆ. 24ರ ಸೋಮವಾರದ ಸಂತೆಯಲ್ಲಿ ತರಕಾರಿ ವ್ಯಾಪಾರ ಮಾಡಿ ಮಧ್ಯಾಹ್ನ 12 ಗಂಟೆಗೆ ತಲೆನೋವು ಎಂದು ಮನೆಗೆ ಹೋದವನು ಅಲ್ಲಿ ತನ್ನ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -