Thursday, July 23, 2026
spot_imgspot_img
spot_imgspot_img

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ..!

- Advertisement -
- Advertisement -

ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ(15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 2000 ಅಡಿ ಆಳದ ಪ್ರಪಾತದಲ್ಲಿ ಮೃತದೇಹ ಪತ್ತೆಯಾಗಿದೆ.

ಮಂಗಳವಾರ(ಏ.7) 41 ಮಂದಿ ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್‍ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶ್ರೀನಂದಾ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು.

ಬಳಿಕ ಎ.ಎನ್.ಎಫ್, ಎಸ್.ಡಿ.ಆರ್.ಎಫ್, ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಚರಣೆ ನಡೆಸಿದ್ದರು. ಇದೀಗ 2000 ಅಡಿ ಆಳದಲ್ಲಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ. ಈ ಘಟನೆಯು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!