- Advertisement -
- Advertisement -



ಉಡುಪಿ: ಮಹಿಳೆಯೊಬ್ಬರು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಕಾಪು ತಾಲೂಕು ಬಡಾ ಎರ್ಮಾಳು ಎಂಬಲ್ಲಿ ನಡೆದಿದೆ.
ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬಬವರು ನಾಪತ್ತೆಯಗಿದ್ದು, 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ, ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2555452, សំ.: 9480805450, .: 0820-2552133, .:9480805431 ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -