- Advertisement -
- Advertisement -
ಮಿತ್ತೂರು: ಕರಾವಳಿಯಲ್ಲಿ ನಿನ್ನೆಯಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ಎದುರಾದ ಘಟನೆ ಮಿತ್ತೂರಿನಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ಕಿರಿದಾದ ಕಾಲುವೆಯಿಂದ ಮಳೆ ನೀರು ಹರಿದು ರಸ್ತೆಯಲ್ಲಿ ಹಾದುಹೋಗುತ್ತಿದ್ದು, ಇದರಿಂದ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ರಸ್ತೆಯಲ್ಲಿ ತುಂಬಿದ ನೀರು ಹಾದುಹೋಗಲು ಪರ್ಯಾಯ ವ್ಯವಸ್ಥೆ ಕಲ್ಪಿಸಿ ವಾಹನ ಸವಾರರಿಗೆ ರಸ್ತೆಯಲ್ಲಿ ಸಂಚರಿಸಲು ಅವಕಾಶ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.
- Advertisement -