Wednesday, June 17, 2026
spot_imgspot_img
spot_imgspot_img

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ಕೊನೆಗೂ ವಿಚಾರಣೆಗೆ ಬೆಳ್ತಂಗಡಿ ಠಾಣೆಗೆ ಹಾಜರು

- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜರ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜರನ್ನು ವಿಚಾರಣೆಗಾಗಿ ಠಾಣೆಗೆ ಕರೆತರಲು ಬೆಳ್ತಂಗಡಿ ಠಾಣಾ ಪೊಲೀಸರು ಪೂಂಜರವರ ಮನೆಗೆ ತೆರಳಿರುತ್ತಾರೆ.

ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳೀನ್ ಕುಮಾರ್ ಕಟೀಲ್ ರವರು, ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದಾರೆ

ಇಂದು ಸಂಜೆ ಬೆಳ್ತಂಗಡಿ ಪೊಲೀಸು ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ. ಜಿ. ಸುಬ್ಬಾಪೂರ ಮಠ್‌ ಅವರು ವಿಚಾರಣೆಗೆ ಹಾಜರಾಗುವಂತೆ ಹರೀಶ್ ಪೂಂಜರಿಗೆ ನೋಟಿಸ್ ನೀಡಿ ತೆರಳಿದ್ದರು.

ಇದೀಗ ನೋಟಿಸ್‌ ನೀಡಿದ ಹಿನ್ನೆಲೆ ಶಾಸಕ ಹರೀಶ್ ಪೂಂಜ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.ಸದ್ಯ ವಿಚಾರಣೆ ನಡೆಯತ್ತಿದೆ ಎನ್ನಲಾಗಿದೆ. ಇನ್ನು ಇದೀಗ ಪೊಲೀಸ್ ಠಾಣೆಗೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಕೂಡ ಆಗಮಿಸಿದ್ದಾರೆ.

- Advertisement -

Related news

error: Content is protected !!