- Advertisement -
- Advertisement -
ಬಸವ ಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್(66) ನಿಧನರಾಗಿದ್ದಾರೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಸಹಾಯದಿಂದ ಅವರಿಗೆ ಚಿಕಿತ್ಸೆ ಕೊಡಲಾಗ್ತಿತ್ತು.

ಆದರೆ ಚಿಕಿತ್ಸೆ ಫಲಿಸದೇ ಇಂದು ಸಂಜೆ ಸಾವನ್ನಪ್ಪಿದ್ದಾರೆ ಅಂತಾ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ನಾರಾಯಣರಾವ್, ಮೈತ್ರಿ ಸರ್ಕಾರದ ವೇಳೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.

- Advertisement -








