Friday, May 23, 2025
spot_imgspot_img
spot_imgspot_img

ಮಂಗಳೂರು: ದೇಶ ವಿರೋಧಿ ಪೋಸ್ಟ್- ವೈದ್ಯೆ ವಿರುದ್ಧ ಪ್ರಕರಣ ದಾಖಲು- ಆಸ್ಪತ್ರೆಯಿಂದ ಅಮಾನತು

- Advertisement -
- Advertisement -

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧ ದೇಶ ವಿರೋಧಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನ ನಂತರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಅಫೀಫ ಫಾತಿಮಾʼ ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ ಎನ್ನುವ ಪೋಸ್ಟ್‌ ಹಾಕಿದ್ದರು. ಈ ಹಿನ್ನಲೆವೈದ್ಯೆ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 196(1)(ಎ) ಮತ್ತು 353(2) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ದೃಢಪಡಿಸಿದ್ದಾರೆ.

ವೈದ್ಯರಿಗೆ ನೋಟಿಸ್ ನೀಡಲಾಗಿದೆ, ಅವರ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಮತ್ತು ಅಧಿಕೃತ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು. ಹೆಚ್ಚುವರಿಯಾಗಿ, ಅವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ಆಡಳಿತ ಮಂಡಳಿಯು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದೆ .

- Advertisement -

Related news

error: Content is protected !!