Saturday, June 28, 2025
spot_imgspot_img
spot_imgspot_img

ಭವಿಷ್ಯದಲ್ಲಿ ನಡೆಯುವ ಭಯೋತ್ಪಾದನೆಯನ್ನು ಯುದ್ಧ ಕೃತ್ಯವೆಂದು ಪರಿಗಣಿಸಲಾಗುವುದು ; ಪಾಕ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಭಾರತ

- Advertisement -
- Advertisement -

ನವದೆಹಲಿ: ಪಾಕಿಸ್ತಾನದಿಂದ ಕ್ಷಿಪಣಿ ಹಾಗೂ ಡ್ರೋನ್‌ಗಳ ಮೂಲಕ ದಾಳಿ ಹೆಚ್ಚುತ್ತಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಸಭೆ ನಡೆದಿದೆ. ಸಭೆ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದಿಂದ ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯ ನಡೆದರೆ ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಭಾರತವು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತದೆ ಎಂಬ ಸಂದೇಶವನ್ನು ರವಾನಿಸಿದೆ. ಕಳೆದ ಮೂರು ರಾತ್ರಿಗಳಿಂದ ಪಾಕಿಸ್ತಾನವು ಉತ್ತರ ಭಾರತದ ಮಿಲಿಟರಿ ನೆಲೆಗಳು ಸೇರಿದಂತೆ ನಾಗರಿಕ ಪ್ರದೇಶಗಳ ಮೇಲೆ ದಾಳಿ ನಡೆಸಲು ಯತ್ನಿಸಿದೆ. ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳನ್ನು ಭಾರತ ನಾಶ ಪಡಿಸಿದೆ.ಇದೀಗ ಭಾರತೀಯ ಸೇನಾ ಮುಖ್ಯಸ್ಥರ ಜೊತೆ ಮೀಟಿಂಗ್‌ ನಡೆಸಿರುವ ಮೋದಿ, ಈ ನಿರ್ಧಾರವನ್ನು ರವಾನಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ (Operation Sindoor) ಏರ್ಪಟ್ಟಿದೆ. ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನ ಹಲವು ನಗರಗಳ ಮೇಲೆ ಡ್ರೋನ್ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ, ಮೇ 8 ಮತ್ತು 9 ರ ಮಧ್ಯರಾತ್ರಿ ಭಾರತೀಯ ಸೇನೆಯು ನಿಯಂತ್ರಣ ರೇಖೆ ಬಳಿ ಇರುವ ಭಯೋತ್ಪಾದಕ ನೆಲೆಗಳ ಮೇಲೆ ಸಂಘಟಿತ ದಾಳಿ ನಡೆಸಿ ನಾಶಪಡಿಸಿದೆ ಎಂದು ಸೇನೆ ತಿಳಿಸಿದೆ.

ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಈ ದಾಳಿ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಗಿದೆ ಎಂದು ADG PI ತಿಳಿಸಿದೆ. “ಆಪರೇಷನ್ ಸಿಂದೂರ್. ಭಾರತೀಯ ಸೇನೆ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದೆ,” ಎಂದು ADGPI ಎಕ್ಸ್‌ ಪೋಸ್ಟ್‌ನಲ್ಲಿ ಘೋಷಿಸಿದೆ.

- Advertisement -

Related news

error: Content is protected !!