Friday, March 29, 2024
spot_imgspot_img
spot_imgspot_img

ಅಮೇರಿಕಾದ ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ(ನ.8): ಅಮೆರಿಕದ 46ನೇ ಅಧ್ಯಕ್ಷರಾಗಿ ಆಯ್ಕೆ ಯಾಗಿರುವ ಜೋ ಬೈಡನ್ ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಮುಂಬರುವ ದಿನಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಇನ್ನಷ್ಟು ಬಲಗೊಳ್ಳಲಿದೆ ಎಂಬ ಆಶಾವಾದವನ್ನು ಮೋದಿ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಪಿಎಂ ಮೋದಿ ‘ಅಭೂತಪೂರ್ವ ಜಯ ಸಾಧಿಸಿರುವ ಜೋ ಬೈಡೆನ್‌ಗೆ ಶುಭಾಶಯ. ಉಪ ರಾಷ್ಟ್ರಪತಿಯಾಗಿದ್ದಾಗ ಭಾರತ ಹಾಗೂ ಅಮೆರಿಕ ನಡುವಿನ ಸಂಬಂಧ ಗಟ್ಟಿಗೊಳಿಸುವ ನಿಮ್ಮ ಯತ್ನ ಮಹತ್ವಪೂರ್ಣ ಹಾಗೂ ಅಮೂಲ್ಯವಾದದ್ದು. ನಾನು ಭಾರತ ಹಾಗೂ ಅಮೆರಿಕ ಸಂಬಂಧವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಮತ್ತೊಂದು ಬಾರಿ ಒಟ್ಟಾಗಿ ಕಾರ್ಯ ನಿರ್ವಹಿಸಲು ಉತ್ಸುಕನಾಗಿದ್ದೇನೆ’ ಎಂದಿದ್ದಾರೆ.

ಕಮಲಾ ಹ್ಯಾರಿಸ್‌ಗೆ ಶುಭ ಕೋರಿರುವ ಪಿಎಂ ಕಮಲಾ ಹ್ಯಾರಿಸ್‌: ‘ನಿಮಗೆ ಶುಭಾಶಯ’ ನಿಮ್ಮ ಗೆಲುವು ಎಲ್ಲರಿಗೂ ಪ್ರೇರಣೆ ಹಾಗೂ ಇದು ಎಲ್ಲಾ ಭಾರತೀಯ ಅಮೆರಿಕನ್ನರಿಗೆ ಹೆಮ್ಮೆಯ ವಿಚಾರ ಎಂದಿದ್ದಾರೆ. ಕಮಲಾ ಹ್ಯಾರಿಸ್ ಉಪಾಧ್ಯಕ್ಷೆಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಯಾಕೆಂದರೆ ಅವರು ಈ ಹುದ್ದೆಗೆ ಆಯ್ಕೆಯಾದ ಮೊದಲ ಮಹಿಳೆಯಾಗಿದ್ದಾರೆ.

- Advertisement -

Related news

error: Content is protected !!