Monday, April 29, 2024
spot_imgspot_img
spot_imgspot_img

ಮೋದಿ ಗ್ಯಾರಂಟಿ-2024; ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

- Advertisement -G L Acharya panikkar
- Advertisement -

ನವದೆಹಲಿ: ಲೋಕಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದರು.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ ದಿನದಂದೇ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿತು. ಮುನ್ನ ಅಂಬೇಡ್ಕರ್‌ ಅವರ ಪುತ್ಥಳಿಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪುಷ್ಪನಮನ ಸಲ್ಲಿಸಿದರು.

ಪ್ರತಿ ಕ್ಷಣವೂ ದೇಶಕ್ಕಾಗಿ ಚುನಾವಣಾ ಘೋಷ ವಾಕ್ಯದೊಂದಿಗೆ ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿತು. ಇದೇ ವೇಳೆ ಪ್ರಧಾನಿ ಮೋದಿ ಅವರ 10 ವರ್ಷಗಳ ಸಾಧನೆ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.

ಪ್ರಣಾಳಿಕೆಯಲ್ಲಿ ಪ್ರಧಾನಿ ಮೋದಿ ಅವರು ಬಡವರು, ಮಹಿಳೆಯರು, ರೈತರು, ಮಹಿಳೆಯರ ಅಭಿವೃದ್ಧಿ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ. 70 ವರ್ಷ ಮೇಲ್ಪಟ್ಟ ಎಲ್ಲರನ್ನೂ ಹಾಗೂ ತೃತೀಯಲಿಂಗಿಗಳನ್ನು ಆಯುಷ್ಮಾನ್ ಭಾರತ್‌ ವ್ಯಾಪ್ತಿಗೆ ಸೇರ್ಪಡೆ ಮಾಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಿದೆ. ಆ ಮೂಲಕ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಒದಗಿಸಲಾಗುವುದು. ಅಲ್ಲದೇ, 3 ಕೋಟಿ ಮನೆ ನಿರ್ಮಾಣ, ಪೈಪ್ ಮೂಲಕ ಮನೆಗೆ ಅಡುಗೆ ಅನಿಲ, 3 ಕೋಟಿ ಗ್ರಾಮೀಣ ಮಹಿಳೆಯರು ‘ಲಖ್ ಪತಿ ದೀದಿ’ ಯೋಜನೆ ಫಲಾನುಭವಿಗಳಾಗಲಿದ್ದಾರೆಂಬ ಭರವಸೆಯನ್ನು ಪ್ರಣಾಳಿಕೆ ನೀಡಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಸಾಮಾನ್ಯ ಮತದಾರರ ಪಟ್ಟಿಯನ್ನು ತರುವುದು, ಏಕರೂಪ ನಾಗರಿಕ ಸಂಹಿತೆ (UCC) ಜಾರಿ, ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್, ಮಹಿಳೆಯರಿಗಾಗಿ ಶೌಚಾಲಯಗಳ ಸಂಖ್ಯೆ ಹೆಚ್ಚಳ ಮತ್ತು ಮಹಿಳಾ ಶಕ್ತಿ ವಂದನ್ ಕಾಯ್ದೆಯ ಅನುಷ್ಠಾನ, ವಂದೇ ಭಾರತ್ ರೈಲು ಜಾಲದ ವಿಸ್ತರಣೆ, ಅಮೃತ್ ಭಾರತ್ ಮತ್ತು ನಮೋ ಭಾರತ್ ರೈಲುಗಳು ಬರಲಿವೆ ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

- Advertisement -

Related news

error: Content is protected !!